ADVERTISEMENT

ಮಂಗಳೂರು: ಎನ್‌ಐಎ ದಾಳಿ ಖಂಡಿಸಿ ಪ್ರತಿಭಟನೆ; ಪಿಎಫ್‌ಐ ಕಾರ್ಯಕರ್ತರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 7:40 IST
Last Updated 22 ಸೆಪ್ಟೆಂಬರ್ 2022, 7:40 IST
ಎಸ್‌ಡಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
ಎಸ್‌ಡಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ   

ಮಂಗಳೂರು: ಎಸ್‌ಡಿಪಿಐ ಕಚೇರಿ ಹಾಗೂ ಎಸ್‌ಡಿಪಿಐ ಜಿಲ್ಲಾ ಘಟಕದ ಪ್ರಮುಖರ ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನೆಲ್ಲಿಕಾಯಿ ರಸ್ತೆಯ ಕಚೇರಿ ಸಮೀಪ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಎನ್ಐಎ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ADVERTISEMENT

ಕೆಲ ದಿನಗಳ ಹಿಂದೆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆದಿತ್ತು.

ಕೆಲವು ಪ್ರಕರಣಗಳಿಗೆ ಸಂಬಂಧಿಸಿ ತನಿಖೆ‌ ನಡೆಯುತ್ತಿದೆ. ಪೊಲೀಸರ ಕೆಲಸಕ್ಕೆ ಕೆಲವರು ಅಡ್ಡಿಪಡಿಸಲು ಪ್ರಯತ್ನಿಸಿದ್ದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.