ಮಂಗಳೂರು: ಪೂಜಾ ಸ್ಥಳಗಳ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಸಮಿತಿಯ ವತಿಯಿಂದ ಶುಕ್ರವಾರ ನಗರದ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಯಿತು.
ಗ್ಯಾನವಾಪಿ ಮಸೀದಿಯೊಳಗೆ ನುಸುಳುವಿಕೆ ಮತ್ತು ಅದರ ಅತಿಕ್ರಮಣವನ್ನು ತಡೆಯಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಮಾತನಾಡಿ, ‘ದೇಶದಲ್ಲಿ ಕಾನೂನು ಇಲ್ಲದಂತಾಗಿದ್ದು, ಪ್ರಜಾಪ್ರಭುತ್ವದ ಕೊಲೆಯಾಗುತ್ತಿದ್ದರೂ, ಜಾತ್ಯತೀತ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸುಮ್ಮನಿರುವುದು ಖಂಡನೀಯ. ನಾವು ನಮ್ಮ ಹಕ್ಕು ಪಡೆಯಲು ಲಾಠಿ ಏಟು ತಿನ್ನಲು, ಜೈಲು ಸೇರಲು, ಹುತಾತ್ಮರಾಗಲು ಸಿದ್ಧರಾಗಬೇಕಾಗಿದೆ. ನ್ಯಾಯಕ್ಕಾಗಿ ಸಂಘರ್ಷ ಮಾಡುವ ಪರಿಸ್ಥಿತಿ ಬಂದಿದೆ’ ಎಂದರು.
ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಜಿಲ್ಲಾ ಘಟಕದ ಅಧ್ಯಕ್ಷ ಅನ್ವರ್ ಸಾದತ್, ವಿಮ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಮುಖಂಡರಾದ ಮಿಸ್ರಿಯಾ ಕಣ್ಣೂರು, ನವಾಝ್ ಉಳ್ಳಾಲ, ಅಥಾವುಲ್ಲ ಜೋಕಟ್ಟೆ, ನೌರಿನ್ ಆಲಂಪಾಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.