ADVERTISEMENT

ಬದುಕಿನಲ್ಲಿ ಸ್ವಾಭಿಮಾನ, ಆತ್ಮವಿಶ್ವಾಸ ಮುಖ್ಯ: ಉದ್ಯಮಿ ನಾಗೇಶ್ ಕೋಟ್ಯಾನ್

ಬಳಂಜ  ನಾರಾಯಣ ಗುರು ಸೇವಾ ಸಮಿತಿಯಿಂದ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 7:07 IST
Last Updated 10 ಫೆಬ್ರುವರಿ 2026, 7:07 IST
ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಗಣ್ಯರು ಉದ್ಘಾಟಿಸಿದರು
ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಗಣ್ಯರು ಉದ್ಘಾಟಿಸಿದರು   

ಬೆಳ್ತಂಗಡಿ: ‘ಬದುಕಿನಲ್ಲಿ ಸ್ವಾಭಿಮಾನ, ಸ್ವಾವಲಂಬನೆ ಹಾಗೂ ಆತ್ಮವಿಶ್ವಾಸ ಮುಖ್ಯ. ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಯುವ ಪ್ರತಿಭೆಗಳಿಗೆ ನಿರಂತರ ಅವಕಾಶ ಸೃಷ್ಟಿಸಿ ಸಮಾಜಕ್ಕೆ ಪ್ರೇರಣೆಯಾಗಿದೆ’ ಎಂದು ಉದ್ಯಮಿ ನಾಗೇಶ್ ಕೋಟ್ಯಾನ್ ಹೇಳಿದರು.

ಮಹಿಳಾ ಬಿಲ್ಲವ ವೇದಿಕೆ ಸಹಕಾರ, ಯುವ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷ ಚಿದಾನಂದ ಇಡ್ಯ ಸಮವಸ್ತ್ರ ಅನಾವರಣಗೊಳಿಸಿದರು.

ADVERTISEMENT

ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್, ಬೆಳ್ತಂಗಡಿ ಗುರುದೇವ ಕಾಲೇಜಿನ ಉಪನ್ಯಾಸಕ ಗಣೇಶ್ ಬಿ.ಶಿರ್ಲಾಲು, ಯುವವಾಹಿನಿ ವೇಣೂರು ಘಟಕಾಧ್ಯಕ್ಷ ಪ್ರಕಾಶ್ ಕೋಟ್ಯಾನ್, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ., ಉದ್ಯಮಿ ಮೋಹನ್ ಸುವರ್ಣ ಮಾತನಾಡಿದರು.

ಬೆಳ್ತಂಗಡಿ ಎಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಬಂಗೇರ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಬಳಂಜ, ಬಳಂಜ ಸಂಘದ ಪೂರ್ವಾಧ್ಯಕ್ಷರನ್ನು ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಶುಭಕರ ಪೂಜಾರಿ ಸಾವ್ಯ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಎಚ್‌.ಧರ್ಣಪ್ಪ ಪೂಜಾರಿ, ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಕಾರ್ಯದರ್ಶಿ ರಂಜಿತ್ ಪೂಜಾರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಕಾರ್ಯದರ್ಶಿ ಸತೀಶ್ ಕೋಟ್ಯಾನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ಕಾರ್ಯದರ್ಶಿ ಸಂಧ್ಯಾ ಎಚ್.ಡಿ, ಭಾಗವಹಿಸಿದ್ದರು.

ಮಹಿಳಾ ಬಿಲ್ಲವ ವೇದಿಕೆಯ ಪುಷ್ಪಾಗಿರೀಶ್ ಪ್ರಾರ್ಥಿಸಿದರು. ಮಹಿಳಾ ಬಿಲ್ಲವ ವೇದಿಕೆ ಪೂರ್ವಾಧ್ಯಕ್ಷೆ ವಿಶಾಲ ಜಗದೀಶ್ ನಿರೂಪಿಸಿದರು. ಸಂಘದ ನಿರ್ದೇಶಕ ಯತೀಶ್ ವೈ.ಎಲ್.ವಂದಿಸಿದರು.