ADVERTISEMENT

ಉಳ್ಳಾಲ | ನಾಲ್ಕು ವಾಹನಗಳ ಸರಣಿ ಅಪಘಾತ; ಅಪ್ಪಚ್ಚಿಯಾದ ಕಾರು

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2023, 9:14 IST
Last Updated 9 ಸೆಪ್ಟೆಂಬರ್ 2023, 9:14 IST
<div class="paragraphs"><p>ಅಪ್ಪಚ್ಚಿಯಾದ&nbsp;ವ್ಯಾಗನಾರ್ ಕಾರು</p></div>

ಅಪ್ಪಚ್ಚಿಯಾದ ವ್ಯಾಗನಾರ್ ಕಾರು

   

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರು ಜೆಪ್ಪುವಿನಲ್ಲಿ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಲಾರಿ ಗುದ್ದಿ, ಅದರ ಹಿಂಭಾಗಕ್ಕೆ ವ್ಯಾಗನಾರ್ ಕಾರು ಗುದ್ದಿ, ಅದಕ್ಕೆ ಬಸ್ಸು ಗುದ್ದಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರಿನ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ. ಪರಿಣಾಮ ಹಿಂಬದಿಯಲ್ಲಿದ್ದ ಲಾರಿ ಸಿಯಾಝ್ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೇ ವೇಳೆ ಲಾರಿ ಹಿಂಭಾಗದಲ್ಲಿದ್ದ ವ್ಯಾಗನಾರ್ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆಯುವ ಸಂದರ್ಭವೇ ಅದರ ಹಿಂಭಾಗದಲ್ಲಿದ್ದ ಕೇರಳ ಸಾರಿಗೆ ಬಸ್ ವ್ಯಾಗನಾರ್ ಕಾರಿಗೆ ಢಿಕ್ಕಿ ಹೊಡೆದಿದೆ.

ADVERTISEMENT

ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ವ್ಯಾಗನಾರ್ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಇತರ ವಾಹನಗಳಲ್ಲಿದ್ದ ಐದು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.