ADVERTISEMENT

ಲೈಂಗಿಕ ‌ಕಿರುಕುಳ: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ‌ ವ್ಯವಸ್ಥಾಪಕನ ಬಂಧನ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2021, 13:59 IST
Last Updated 14 ಅಕ್ಟೋಬರ್ 2021, 13:59 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮಂಗಳೂರು: ಕಚೇರಿಯ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಆರೋಪದ ಮೇಲೆ ದಾಖಲಾದ ದೂರಿನ್ವಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜಾಮೀನು ನೀಡಲಾಗಿದೆ.
ಕಚೇರಿಯ ಸಿಬ್ಬಂದಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿರುವುದಾಗಿ ಫಾರೂಕ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ದೂರಿನ ಆಧಾರದಲ್ಲಿ ಮಹಮ್ಮದ್ ಫಾರೂಕ್ ಅವರನ್ನು ಪೊಲೀಸರು ಬಂಧಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.