ADVERTISEMENT

ಲೈಂಗಿಕ ಕಿರುಕುಳ, ಮಾನಭಂಗ ಯತ್ನ: ಮುಡಾ ಆಯುಕ್ತರ ವಿರುದ್ಧ ಮಹಿಳಾ ಸಿಬ್ಬಂದಿ ದೂರು

​ಪ್ರಜಾವಾಣಿ ವಾರ್ತೆ
Published 7 ಜನವರಿ 2024, 15:02 IST
Last Updated 7 ಜನವರಿ 2024, 15:02 IST
<div class="paragraphs"><p>ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ</p></div>

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ

   

ಚಿತ್ರಕೃಪೆ: ಫೇಸ್‌ಬುಕ್

ಮಂಗಳೂರು: ಉರ್ವಸ್ಟೋರ್‌ನಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರು ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ADVERTISEMENT

ಈ ಕುರಿತು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಅವರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು ಉರ್ವ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಮುಡಾ ಆಯುಕ್ತರಾದ ಮನ್ಸೂರು ಆಲಿ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರಾಧಿಕಾರದ ಮಹಿಳಾ ಸಿಬ್ಬಂದಿಯೊಬ್ಬರು ಶುಕ್ರವಾರ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 354ರ (ಮಹಿಳೆಯ ಮೇಲೆ ಹಲ್ಲೆ ಮತ್ತು ಮಾನಭಂಗ ಯತ್ನ) ಹಾಗೂ 354 ಎ(ಲೈಂಗಿಕ ಕಿರುಕುಳ) ಅಡಿ ಉರ್ವಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಪೊಲೀಸ್‌ ಅನುಪಮ್‌ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.