ADVERTISEMENT

ಶಕ್ತಿ ಶಾಲೆ: ಸಾಂಸ್ಕೃತಿಕ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 16:07 IST
Last Updated 15 ಆಗಸ್ಟ್ 2022, 16:07 IST
ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಸಾರುವ ನೃತ್ಯರೂಪಕ ಪ್ರದರ್ಶಿಸಿದರು
ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಸಾರುವ ನೃತ್ಯರೂಪಕ ಪ್ರದರ್ಶಿಸಿದರು   

ಮಂಗಳೂರು: ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಕಾರ್ಕಳದ ಜ್ಞಾನ ಸುಧಾ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಶಾಲಾ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನದ ಮೂಲಕ ಗೌರವ ಸಮರ್ಪಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ. ನಾಯ್ಕ್ ಮಾತನಾಡಿ, ದೇಶವನ್ನು ಪ್ರೀತಿಸಬೇಕು ಹಾಗೂ ಗೌರವಿಸಬೇಕೆಂದು ಹೇಳಿದರು.

ಆಡಳಿತ ಮಂಡಳಿ ಸದಸ್ಯೆ ಸಗುಣ ಸಿ ನಾಯ್ಕ್, ಪ್ರಧಾನ ಸಲಹೆಗಾರ ರಮೇಶ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪೃಥ್ವಿರಾಜ್, ಶಕ್ತಿ ವಸತಿ ಶಾಲೆ ಪ್ರಾಂಶುಪಾಲೆ ವಿದ್ಯಾ ಜಿ. ಕಾಮತ್, ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ಪೆಟ್ರಿಶಿಯ ಪಿಂಟೊ ಉಪಸ್ಥಿತರಿದ್ದರು. ಸ್ನೇಹಾ ಸ್ವಾಗತಿಸಿದರು. ವಂಶಿ ವಂದಿಸಿದರು. ಶಿಕ್ಷಕಿ ಚೈತ್ರಾ ಯು. ಭಂಡಾರಿ ನಿರೂಪಿಸಿದರು. ವಿದ್ಯಾರ್ಥಿಗಳಿಂದ ದೇಶ ಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.