ADVERTISEMENT

ಕಲಾವಿದರಿಗೆ ಯಕ್ಷನಿಧಿ ಸಮರ್ಪಣೆ

ಶರಧಿ ಫೌಂಡೇಶನ್ ಟ್ರಸ್ಟ್‌ನಿಂದ ‘ಯಕ್ಷ ಸಂಗಮ’

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 16:27 IST
Last Updated 13 ಆಗಸ್ಟ್ 2022, 16:27 IST
ಶರಧಿ ಫೌಂಡೇಷನ್ ಟ್ರಸ್ಟ್‌ ಮಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರದರ್ಶನಗೊಂಡಿತು.
ಶರಧಿ ಫೌಂಡೇಷನ್ ಟ್ರಸ್ಟ್‌ ಮಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರದರ್ಶನಗೊಂಡಿತು.   

ಮಂಗಳೂರು: ಸ್ವಾತಂತ್ರದ ಅಮೃತ ಮಹೋತ್ಸವದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಶರಧಿ ಫೌಂಡೇಷನ್ ಟ್ರಸ್ಟ್ ಆಯೋಜಿಸಿದ್ದ ‘ಯಕ್ಷ ಸಂಗಮ’ ಕಾರ್ಯಕ್ರಮದಲ್ಲಿ ಅಶಕ್ತ ಕಲಾವಿದರಾದ ಗಣೇಶ್ ಕೊಲೆಕಾಡಿ, ಮಹಾಬಲೇಶ್ವರ ಭಟ್ ಭಾಗಮಂಡಲ ಮತ್ತು ನಾರಾಯಣ ಪುರುಷ ಸಜಂಕಿಲ ಅವರಿಗೆ ಯಕ್ಷನಿಧಿ ಅರ್ಪಿಸಲಾಯಿತು.

ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಕಲಾವಿದ ಪುಂಡರೀಕಾಕ್ಷ ಉಪಾಧ್ಯ ಅವರಿಗೆ ಯಕ್ಷ ಶರಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಜಯ್ ಕುಮಾರ್ ಗೋಣಿಬೀಡು, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಮುರಾರಿ ಕಡಂಬಳಿತ್ತಾಯ, ರಾಮ ಸಾಲಿಯಾನ್ ಮಂಗಲ್ಪಾಡಿ, ಕೃತಿ ಕರ್ಕೇರ ಮತ್ತು ಲಲನಾ ಜೆ ಶೆಣೈ ಅವರಿಗೆ ಯಕ್ಷ ಗೌರವ ನೀಡಿ ಗೌರವಿಸಲಾಯಿತು.

ಶಾಸಕ ವೇದವ್ಯಾಸ ಕಾಮತ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಪ್ರಮುಖರಾದ ಭರತ್‌ರಾಜ್ ಕಾವೂರು, ವಿನಯ ಆಚಾರ್ಯ, ಕಿರಣ್‌ಕುಮಾರ್ ಕೋಡಿಕಲ್, ಕಿಶೋರ್ ಕೊಟ್ಟಾರಿ, ಮನೋಜ್ ಕುಮಾರ್, ಗಣೇಶ್ ಕುಲಾಲ್, ಶರಧಿ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಜೀವನ್ ಅಮೀನ್ ಇದ್ದರು. ನಮೃತಾ ರಾವ್ ಸ್ವಾಗತಿಸಿದರು. ಧೀರಜ್ ಕೊಟ್ಟಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಿಕಾ ಜೀವನ್ ವಂದಿಸಿದರು. ನರೇಶ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.