ಮಂಗಳೂರು: ‘ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಬಂದ ಜಗದೀಶ ಶೆಟ್ಟರ್, ಈಗ ಲೋಕಸಭಾ ಚುನಾವಣೆ ಎದುರಿನಲ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ರೀತಿ ಪಕ್ಷಾಂತರ ಮಾಡುವುದು ದೇಶದ್ರೋಹದ ಕೆಲಸ’ ಎಂದು ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
‘ಬಿಜೆಪಿಯಲ್ಲಿ ಅವರಿಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಕಾಂಗ್ರೆಸ್‌ಗೆ ಬಂದ್ದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಅವರು ಪರಾಭವಗೊಂಡರೂ, ಅನೇಕ ಕಾಂಗ್ರೆಸ್ ಹಿರಿಯ ಕಾರ್ಯಕರ್ತರನ್ನು ಬದಿಗಿಟ್ಟು, ಶೆಟ್ಟರ್ ಅವರಿಗೆ ವಿಧಾನ ಪರಿಷತ್‌ಗೆ ಆಯ್ಕೆ ಮಾಡಲಾಗಿತ್ತು. ಆದರೆ, ಈಗ ಈ ರೀತಿ ಬೆಳವಣಿಗೆ ಆಗಿದ್ದು ಸರಿಯಲ್ಲ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಖೇದ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.