ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆಶಿಫಾ ಹುಸೈನ್ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದಿದ್ದಾರೆ.
ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿರುವ ಆಶಿಫಾ ಹುಸೈನ್, ಸಂಸ್ಕೃತವನ್ನು ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದರು. ದ್ವಿತೀಯ ಪಿಯುಸಿಯಲ್ಲಿ ಒಟ್ಟು 563 ಅಂಕ ಗಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಕಾವು ಅಮ್ಚಿನಡ್ಕದ, ಪ್ರಸ್ತುತ ಬೆಂಗಳೂರಿನಲ್ಲಿ ಕೇಂದ್ರ ಸಂಪರ್ಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಖೈರುನ್ನೀಸಾ ಮತ್ತು ಜಾಕೀರ್ ದಂಪತಿ ಪುತ್ರಿ ಈಕೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.