ADVERTISEMENT

ಶಿರಾಡಿ: ಪಿಡಿಒ ಅಮಾನತು ಆದೇಶಕ್ಕೆ ರಾಜ್ಯ ಆಡಳಿತ ನ್ಯಾಯ ಮಂಡಳಿ ಮಧ್ಯಂತರ ತಡೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2022, 12:11 IST
Last Updated 20 ಜುಲೈ 2022, 12:11 IST
ವೆಂಕಟೇಶ್
ವೆಂಕಟೇಶ್   

ನೆಲ್ಯಾಡಿ (ಉಪ್ಪಿನಂಗಡಿ): ಕರ್ತವ್ಯಲೋಪ ಎಸಗಿದ ಮತ್ತು ಗ್ರಾಮ ಪಂಚಾಯಿತಿ ಲೆಕ್ಕಪತ್ರಗಳ ನಿರ್ವಹಣೆಯಲ್ಲಿ ನಿಯಮ ಉಲ್ಲಂಘಿಸಿ ಶಿಷ್ಟಾಚಾರ ಪಾಲಿಸದೇ ಇದ್ದ ಆರೋಪದಲ್ಲಿ ಅಮಾನತು ಆಗಿದ್ದ ಶಿರಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ.ವೆಂಕಟೇಶ್ ಅಮಾನತು ಆದೇಶಕ್ಕೆ ರಾಜ್ಯ ಆಡಳಿತ ನ್ಯಾಯ ಮಂಡಳಿ (ಕೆಎಟಿ) ತಡೆ ನೀಡಿದೆ.

ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳದೆ ತಾವೇ ಗುತ್ತಿಗೆದಾರರನ್ನು ನೇಮಕ ಮಾಡಿಕೊಂಡಿದ್ದಾರೆ, ಏಲಂ ಪ್ರಕ್ರಿಯೆ ನಿಯಮಾನುಸಾರ ನಡೆಸಲಿಲ್ಲ, ಫಲಾನುಭವಿಗಳಿಗೆ ಚೆಕ್ ಮೂಲಕ ಸಹಾಯಧನ ಪಾವತಿಸಿದ್ದಾರೆ, ಕರ್ತವ್ಯಕ್ಕೆ ಸರಿಯಾಗಿ ಹಾಜರಾಗಲಿಲ್ಲ, ಖರೀದಿ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವೆಂಕಟೇಶ್ ಅವರನ್ನು ಜೂನ್ 7ರಂದು ಮಂಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅಮಾನತುಗೊಳಿಸಿದ್ದರು.

ಇದನ್ನು ಪ್ರಶ್ನಿಸಿ ವೆಂಕಟೇಶ್ ಅವರು ಕೆಎಟಿ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೆಎಟಿ ಮುಂದಿನ ಆದೇಶದ ವರೆಗೆ ವೆಂಕಟೇಶ್ ಅವರ ಅಮಾನತು ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ನೀಡಿದ್ದು ತಕ್ಷಣ ಜಾರಿಗೆ ಬರುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ
ಅಧಿಕಾರಿ ಹುದ್ದೆಗೆ ಹಾಜರಾಗಲು ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.