ADVERTISEMENT

ಶಿರ್ತಾಡಿ ಸಹಕಾರಿ ಸಂಘ: ಕಾಂಗ್ರೆಸ್ ಬೆಂಬಲಿತರ ಪಾಲು 

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 7:41 IST
Last Updated 14 ಜುಲೈ 2025, 7:41 IST
ಮೂಡುಬಿದಿರೆಯ ಶಿರ್ತಾಡಿ ಸಹಕಾರಿ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳನ್ನು ಗೆದ್ದುಕೊಂಡರು
ಮೂಡುಬಿದಿರೆಯ ಶಿರ್ತಾಡಿ ಸಹಕಾರಿ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳನ್ನು ಗೆದ್ದುಕೊಂಡರು   

ಮೂಡುಬಿದಿರೆ: ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ತಾಲ್ಲೂಕಿನ ಶಿರ್ತಾಡಿ ಸೇವಾ ಸಹಕಾರಿ ಸಂಘದ 11 ನಿರ್ದೇಶಕರ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.

ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದಿಂದ ವಿಭಜನೆಗೊಂಡ ಬಳಿಕ ನೂತನವಾಗಿ ಅಸ್ತಿತ್ವಕ್ಕೆ ಬಂದ ಶಿರ್ತಾಡಿ ಸೇವಾ ಸಹಕಾರಿ ಸಂಘದ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಪ್ರಥಮ ಚುನಾವಣೆ ನಡೆಯಿತು. ಕಲ್ಲಬೆಟ್ಟು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದ ಕಾಂಗ್ರೆಸ್ ಬೆಂಬಲಿತ ತಂಡ ಎಲ್ಲಾ ಸ್ಥಾನಗಳನ್ನು ಗೆದ್ದುಕೊಂಡಿದೆ.

ಪ್ರವೀಣ್ ಕುಮಾರ್, ಚಿಂತನ್ ಲೋಬೊ, ತಾರನಾಥ ಶೆಟ್ಟಿ, ಕೆ.ಎಚ್.ಲಕ್ಷ್ಮಣ, ಅಬ್ದುಲ್ ಖಾದರ್, ಸನತ್ ಶೆಟ್ಟಿ, ಆಗ್ನೇಸ್ ಡಿಸೋಜಾ, ಸುಗಂಧಿ, ರಾಘವ ಸುವರ್ಣ, ಸದಾನಂದ ಸುವರ್ಣ ಹಾಗೂ ಉಮೇಶ್ ನಾಯ್ಕ್ ಆಯ್ಕೆಯಾದವರು. 

ADVERTISEMENT

ಸುದೀಪ್ ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಶಿವಲಿಂಗಯ್ಯ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಮಾಜಿ ಸಚಿವ ಅಭಯಚಂದ್ರ ಜೈನ್ ಸ್ಥಳಕ್ಕೆ ಭೇಟಿ ನೀಡಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.