ADVERTISEMENT

ಮಾಧ್ಯಮಕ್ಕೆ ಹೆಚ್ಚಿನ ಹೊಣೆಗಾರಿಕೆ: ಶಿವಾನಂದ ತಗಡೂರು

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2022, 6:23 IST
Last Updated 24 ಏಪ್ರಿಲ್ 2022, 6:23 IST
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಶಿವಾನಂದ ತಗಡೂರು ಅವರನ್ನು ದಕ್ಷಿಣ ಕನ್ನಡ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಶಿವಾನಂದ ತಗಡೂರು ಅವರನ್ನು ದಕ್ಷಿಣ ಕನ್ನಡ ಘಟಕದ ವತಿಯಿಂದ ಸನ್ಮಾನಿಸಲಾಯಿತು.   

ಮಂಗಳೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಬರೆದ ‘ಕೋವಿಡ್ ಕತೆಗಳು’ ಪುಸ್ತಕವನ್ನು ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಗೊಳಿಸಲಾಯಿತು.

ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಪತ್ರಕರ್ತ ಚಿದಂಬರ ಬೈಕಂಪಾಡಿ, ‘ಪತ್ರಕರ್ತರ ನೋವುಗಳಿಗೆ ಶಿವಾನಂದ ತಗಡೂರು ಸೂಕ್ತವಾಗಿ ಸ್ಪಂದಿಸಿದ್ದಾರೆ. ಸುದ್ದಿಯ ಜತೆಗೆ ಮಾನವೀಯತೆಯ ಇನ್ನೊಂದು ಮುಖವನ್ನು ಪುಸ್ತಕದಲ್ಲಿ ಅನಾವರಣಗೊಳಿಸಲಾಗಿದೆ’ ಎಂದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ‘ಆಡಳಿತದ ಅಂಗಗಳು ಕಲುಷಿತಗೊಂಡಿರುವ ಸಂದರ್ಭದಲ್ಲಿ ಮಾಧ್ಯಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ’ ಎಂದರು. ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷ ಶ್ರೀನಿವಾಸ ಕಪ್ಪಣ್ಣ ಮಾತನಾಡಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಶಿವಾನಂದ ತಗಡೂರು ಅವರನ್ನು ಸನ್ಮಾನಿಸಲಾಯಿತು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.