ADVERTISEMENT

ಅನ್ನಭಾಗ್ಯದಲ್ಲಿ ಅವ್ಯವಹಾರದ ಶಂಕೆ: ₹1.32 ಕೋಟಿಯ ಅಕ್ಕಿ ದಾಸ್ತಾನು ವ್ಯತ್ಯಾಸ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2023, 8:26 IST
Last Updated 18 ಆಗಸ್ಟ್ 2023, 8:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮದ ಸಗಟು ಗೋದಾಮಿನಲ್ಲಿ ಪಡಿತರ ವಿತರಣೆಗೆ ದಾಸ್ತಾನು ಮಾಡಿದ್ದ ಅಕ್ಕಿಯಲ್ಲಿ ವ್ಯತ್ಯಾಸ ಕಂಡು ಬಂದಿರುವ ಬಗ್ಗೆ ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮದ ಕಚೇರಿ ವ್ಯವಸ್ಥಾಪಕ ಶರತ್‌ಕುಮಾರ್ ಅವರು ಬಂಟ್ವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಭೌತಿಕ ದಾಸ್ತಾನಿಗಿಂತ ಅಂದಾಜು ₹1.32 ಕೋಟಿ ಮೌಲ್ಯದ 3,892 ಕ್ವಿಂಟಲ್‌ ಅಕ್ಕಿ ಕೊರತೆ ಕಂಡು ಬಂದಿದೆ.

ಇದೇ‌ ಗೋದಾಮಿನಿಂದ ಬಂಟ್ವಾಳ ನಗರಕ್ಕೆ ಪಡಿತರ ಅಕ್ಕಿ ಸರಬರಾಜು ಆಗುತ್ತದೆ.‌ ಪಡಿತರ ವಿತರಣೆ ವಿಳಂಬ ಆಗುತ್ತಿರುವ ಬಗ್ಗೆ ಅನುಮಾನಗೊಂಡು, ಜಿಲ್ಲಾ ವ್ಯವಸ್ಥಾಪಕರ ಮೌಖಿಕ ಆದೇಶದ ಮೇಲೆ ಗುರುವಾರ ಪರಿಶೀಲನೆ ನಡೆಸಿದಾಗ ಈ ವಿಷಯ ಗಮನಕ್ಕೆ ಬಂದಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.