ಮಂಗಳೂರು: ಸಮಾವೇಶ ಆಯೋಜನೆಗೊಂಡಿರುವನಗರದ ಗೋಲ್ಡ್ ಫಿಂಚ್ ಮೈದಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಂತೆ ಜನರು ಕರತಾಡನದ ಮೂಲಕ ಸ್ವಾಗತಿಸಿದರು.
ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮೋದಿ ಅವರಿಗೆ ಹಾರ, ಪೇಟ ತೊಡಿಸಿ ಸ್ವಾಗತಿಸಿದರು. ಉಡುಪಿ ಶ್ರೀಕೃಷ್ಣ ನ ಮೂರ್ತಿ ನೀಡಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಪರಶುರಾಮನ ಮೂರ್ತಿ ನೀಡಿದರು.
ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.