ADVERTISEMENT

ದೇಶದಲ್ಲಿ ವಿಷಮ ಪರಿಸ್ಥಿತಿ: ಸುನಿಲ್ ಕುಮಾರ್ ಬಜಾಲ್

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 6:41 IST
Last Updated 25 ಜೂನ್ 2022, 6:41 IST
 ಶ್ರೀನಿವಾಸ್ ಬಜಾಲ್ ಹತ್ಯೆಯಾದ ಸ್ಥಳದಿಂದ ಘೋಷಣೆಗಳನ್ನು ಕೂಗುವ ಮೂಲಕ ಪಕ್ಕಲಡ್ಕ ಬಸ್ ನಿಲ್ದಾಣದವರೆಗೆ ಡಿವೈಎಫ್‌ಐ ಕಾರ್ಯಕರ್ತರು ಮೆರವಣಿಗೆ ನಡೆಸಿದರು
 ಶ್ರೀನಿವಾಸ್ ಬಜಾಲ್ ಹತ್ಯೆಯಾದ ಸ್ಥಳದಿಂದ ಘೋಷಣೆಗಳನ್ನು ಕೂಗುವ ಮೂಲಕ ಪಕ್ಕಲಡ್ಕ ಬಸ್ ನಿಲ್ದಾಣದವರೆಗೆ ಡಿವೈಎಫ್‌ಐ ಕಾರ್ಯಕರ್ತರು ಮೆರವಣಿಗೆ ನಡೆಸಿದರು   

ಮಂಗಳೂರು: ಕೋಮುವಾದವೆಂಬ ವಿಷ ದೇಶದೆಲ್ಲೆಡೆ ಆವರಿಸಿ ವಿಷಮ ಪರಿಸ್ಥಿತಿಯನ್ನು ನಿರ್ಮಿಸಿದೆ. ಕೇಂದ್ರದ ಬಿಜೆಪಿ ಸರ್ಕಾರ ಫ್ಯಾಸಿಸ್ಟ್ ಮಾದರಿಯಲ್ಲಿ ದೇಶವನ್ನಾಳುತ್ತಿದೆ ಎಂದುಡಿವೈಎಫ್ಐ ಮುಖಂಡ ಸುನಿಲ್ ಕುಮಾರ್ ಬಜಾಲ್ ಅಭಿಪ್ರಾಯಪಟ್ಟರು.

ಶ್ರೀನಿವಾಸ್ ಬಜಾಲ್ ಅವರ 20ನೇ ವರ್ಷದ ಹುತಾತ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ ಬಜಾಲ್ ಪರಿಸರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಾಗುವ ಅನ್ಯಾಯ ದಬ್ಬಾಳಿಕೆಗಳ ವಿರುದ್ಧ, ಸರ್ಕಾರದ ಕೋಮು ರಾಜಕಾರಣದ ಆಡಳಿತ ನೀತಿಯ ವಿರುದ್ಧ ಧ್ವನಿ ಎತ್ತಿದರೆ, ಅಂತಹ ಧ್ವನಿಯನ್ನು ಹಿಂಸೆಯ ಮೂಲಕ ಹತ್ತಿಕ್ಕುವ ಅಥವಾ ದೇಶದ್ರೋಹದ ಪ್ರಕರಣ ದಾಖಲಿಸಿ ಹೋರಾಟವನ್ನು ಕುಗ್ಗಿಸುವ ದಮನಕಾರಿ ಧೋರಣೆಯನ್ನು ಬಿಜೆಪಿ ಅನುಸರಿಸುತ್ತಿದೆ ಎಂದರು.

ADVERTISEMENT

ಡಿವೈಎಫ್ಐ ಮುಖಂಡ ದೀಪಕ್ ಬಜಾಲ್, ಜಿಲ್ಲಾ ಘಟಕದ ಕಾರ್ಯದರ್ಶಿ ಸಂತೋಷ್ ಬಜಾಲ್, ಕಾರ್ಮಿಕ ಮುಖಂಡರಾದ ಸುರೇಶ್ ಬಜಾಲ್, ಅಶೋಕ್ ಸಾಲ್ಯಾನ್, ಡಿವೈಎಫ್ಐ ಪಕ್ಕಲಡ್ಕ ಘಟಕದ ಕಾರ್ಯದರ್ಶಿ ಧೀರಜ್ ಬಜಾಲ್, ಜಗದೀಶ್ ಬಜಾಲ್, ಪ್ರಕಾಶ್ ಶೆಟ್ಟಿ, ವರಪ್ರಸಾದ್ ಕುಲಾಲ್, ಅಶೋಕ್ ಎನೆಲ್ ಮಾರ್, ಆನಂದ ಎನೆಲ್ ಮಾರ್, ಜಗದೀಶ್ ಕುಲಾಲ್, ಮಧುವಂತ್, ಪ್ರೀತೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.