ADVERTISEMENT

ರಾಜಕೀಯ ಹುಡುಕುವ ಸಿದ್ದರಾಮಯ್ಯ: ನಳಿನ್‌ಕುಮಾರ್ ಕಟೀಲ್ ಆರೋಪ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2022, 8:28 IST
Last Updated 3 ಮಾರ್ಚ್ 2022, 8:28 IST
ನಳಿನ್‌ಕುಮಾರ್ ಕಟೀಲ್
ನಳಿನ್‌ಕುಮಾರ್ ಕಟೀಲ್   

ಮಂಗಳೂರು: ಉಕ್ರೇನ್‌ನಲ್ಲಿ ಸಿಲುಕಿರುವ ದೇಶದ ಪ್ರಜೆಗಳನ್ನು ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲ ಪ್ರಯತ್ನ ಮಾಡುತ್ತಿದೆ. ಆದರೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಲ್ಲೂ ರಾಜಕೀಯ ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಆರೋಪಿಸಿದರು.

‘ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಕರೆತರುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಗುರುವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳೂ ಸೇರಿದಂತೆ ದೇಶದ ಜನರನ್ನು ಸುರಕ್ಷಿತವಾಗಿ ಕರೆತರಲು ಪ್ರಧಾನಮಂತ್ರಿ ನಾಲ್ಕು ತಂಡಗಳನ್ನು ರಚಿಸಿದ್ದು, ತಂಡದಲ್ಲಿರುವ ಸಚಿವರು ವಿದೇಶಕ್ಕೆ ತೆರಳಿದ್ದಾರೆ. ಎಲ್ಲ ಸಂಗತಿಗಳ ಅರಿವಿರುವ ಸಿದ್ದರಾಮಯ್ಯ, ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ಈ ರೀತಿ ಮಾತನಾಡುವುದು ದೇಶಕ್ಕೇ ಅವಮಾನವಾಗಿದೆ. ಇದು ಅವರ ಸಣ್ಣತನವನ್ನು ತೋರಿಸುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.