ADVERTISEMENT

ಮಂಗಳೂರು: ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 15:11 IST
Last Updated 22 ಜುಲೈ 2021, 15:11 IST
   

ಮಂಗಳೂರು: ನಗರದ ಯೇನೆಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಗುರುವಾರ ಸಂಜೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆರ್.‌ಪಾಟೀಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಸ್ಪತ್ರೆಗೆ ಭೇಟಿ ನೀಡಿದರು.

ನಂತರ ಆಸ್ಕರ್ ಪತ್ನಿ ಬ್ಲಾಸಂ ಫರ್ನಾಂಡಿಸ್ ಹಾಗೂ ವೈದ್ಯರ ಜೊತೆ, ಕಾಂಗ್ರೆಸ್ ನಾಯಕರು ಚರ್ಚಿಸಿದರು.

ರಾಜ್ಯಸಭಾ ಸದಸ್ಯ, ಕಾಂಗ್ರೆಸ್‌ನಹಿರಿಯ ಮುಖಂಡಆಸ್ಕರ್ ಫರ್ನಾಂಡಿಸ್, ಭಾನುವಾರ ಬೆಳಿಗ್ಗೆ ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡಿದ್ದರು.

ADVERTISEMENT

ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲ ಎಂದು ನಿರ್ಲಕ್ಷಿಸಿದ್ದ ಅವರು ಸುಮ್ಮನಾಗಿದ್ದರು. ಸಂಜೆ ಮಾಮೂಲಿ ಆರೋಗ್ಯ ತಪಾಸಣೆಗಾಗಿ ಯೇನೆಪೋಯ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ, ತಲೆಯ ಒಳಭಾಗಕ್ಕೆ ಪೆಟ್ಟಾಗಿರುವುದು ಪರೀಕ್ಷೆಯಲ್ಲಿ ತಿಳಿದುಬಂದಿತ್ತು. ಆರೋಗ್ಯದಲ್ಲೂ ಏರುಪೇರು ಉಂಟಾಗಿತ್ತು. ಹಾಗಾಗಿ, ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.