ADVERTISEMENT

ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ ಮರಣೋತ್ತರ ಪರೀಕ್ಷೆಗೆ ಇಬ್ಬರು ತಜ್ಞರ ನಿಯೋಜನೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2019, 4:41 IST
Last Updated 31 ಜುಲೈ 2019, 4:41 IST
   

ಮಂಗಳೂರು:ನಗರದ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಆರಂಭವಾಗಿದೆ.

ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಮಂಗಳೂರು ಉಪ ವಿಭಾಗಾಧಿಕಾರಿ ರವಿಚಂದ್ರ ನಾಯಕ್, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ಉ ಪಸ್ಥಿತಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ.

ಮೃತದೇಹದ ಮರಣೋತ್ತರ ಪರೀಕ್ಷೆಗೆ ಇಬ್ಬರು ವಿಧಿ ವಿಜ್ಞಾನ ತಜ್ಞರನ್ನು ನಿಯೋಜಿಸಲಾಗಿದೆ ಎಂದು ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ತಿಳಿಸಿದರು.

ADVERTISEMENT

ನಿಯಮಾವಳಿ ಪ್ರಕಾರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಹೆಚ್ಚಿನ ಪರೀಕ್ಷೆಗಾಗಿ ದೇಹದ ಕೆಲವು ಮಾದರಿಗಳನ್ನು ಸಂಗ್ರಹಿಸಲಾಗುವುದು ಎಂದರು.

ಬೆಳಿಗ್ಗೆ 10.30ರ ಸುಮಾರಿಗೆ ಮೃತದೇಹವನ್ನು ಮಂಗಳೂರಿನಿಂದ ಚಾರ್ಮಾಡಿ ಘಾಟಿ ಮಾರ್ಗವಾಗಿ ಮೂಡಿಗೆರೆಗೆ ಕೊಂಡೊಯ್ಯಲಾಗುತ್ತದೆ. ಬಳಿಕ ಸ್ವಗ್ರಾಮ‌ ಚೇತನಹಳ್ಳಿಗೆ ಕೊಂಡೊಯ್ಯಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.