ಪ್ರಾತಿನಿಧಿಕ ಚಿತ್ರ
ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ ಅಪರಾಧಗಳು ನಡೆದಿವೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಸೋಮವಾರ ಗ್ರಾಮ ಪಂಚಾಯಿತಿ ನಾಲ್ವರು ಮಾಜಿ ಅಧ್ಯಕ್ಷರನ್ನು ವಿಚಾರಣೆಗೆ ಒಳಪಡಿಸಿತು.
ಎಸ್‌ಐಟಿ ನೀಡಿದ್ದ ನೋಟಿಸ್‌ನಂತೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೇಶವ ಗೌಡ, ಪ್ರಭಾಕರ ಪೂಜಾರಿ, ಗೀತಾ, ಚಂದನ್ ಕಾಮತ್ ಅವರು ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.
ಇವರುಗಳು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಸಹಜ ಸಾವು ಪ್ರಕರಣದಲ್ಲಿ ಶವ ಹೂತಿರುವ ಸಂಬಂಧ ಬಿಲ್ ಪಾವತಿಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.