ಎಸ್.ಎಂ.ಕೃಷ್ಣ
ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಲು ಸರ್ಕಾರ ಇದೇ 11ರಂದು ರಜೆ ಘೋಷಣೆ ಮಾಡಿದ್ದು, ಬುಧವಾರ ನಡೆಯ ಬೇಕಿದ್ದ ಎಲ್ಲ ಪದವಿ ಪರೀಕ್ಷೆಗಳನ್ನು ಮಂಗಳೂರು ವಿಶ್ವವಿದ್ಯಾನಿಲಯವು ಮುಂದೂಡಿದೆ.
ಮುಂದೂಡಲಾದ ಪರೀಕ್ಷೆ ನಡೆಯುವ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.