ಮಂಗಳೂರು: ಅಸಂಘಟಿತ ಕಾರ್ಮಿಕರಿಗೆ ನೀಡುತ್ತಿರುವ ಸ್ಮಾರ್ಟ್ ಕಾರ್ಡ್ ಸೌಲಭ್ಯವನ್ನು ಕಂಬಳದಲ್ಲಿ ತೊಡಗಿಸಿಕೊಂಡಿರುವವರಿಗೂ ವಿತರಿಸಲು ಒಂದು ವಾರದೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಮಾತನಾಡಿದ ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಬೇಡಿಕೆಗೆ ಸ್ಪಂದಿಸಿ ಈ ಭರವಸೆ ನೀಡಿದರು.
ಈಗ 101 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದ್ದು ಕಂಬಳ ಕಾರ್ಮಿಕರನ್ನು ಈ ಯೋಜನೆಯಲ್ಲಿ ಸೇರಿಸಲು ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ₹ 1 ಸೆಸ್ ಹೇರಿ ಕಾರ್ಮಿಕ ಇಲಾಖೆಗೆ ಕೊಟ್ಟರೆ ಅದರಲ್ಲಿ 1.30ಕೋಟಿ ಕಾರ್ಮಿಕರಿಗೆ ಆರೋಗ್ಯ ಕಾರ್ಡ್ ವಿತರಿಸಬಹುದಾಗಿದೆ. ಈ ಪ್ರಸ್ತಾಪವನ್ನು ಮುಖ್ಯಮಂತ್ರಿ ಮುಂದೆ ಇರಿಸಿದ್ದು ಸಕಾರಾತ್ಮಕ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.