ADVERTISEMENT

ಕಂಬಳ ಕಾರ್ಮಿಕರಿಗೂ ಸ್ಮಾರ್ಟ್‌ ಕಾರ್ಡ್‌: ಕಾರ್ಮಿಕ ಸಚಿವ ಸಂತೋಷ್ ಲಾಡ್

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 6:25 IST
Last Updated 11 ಅಕ್ಟೋಬರ್ 2025, 6:25 IST
<div class="paragraphs"><p>ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಅಂಗವಿಕಲ ವಿಶ್ವನಾಥ್ ರೈ ವೇದಿಕೆಗೆ ಬಂದಾಗ ಕಾರ್ಮಿಕ ಸಚಿವ ಸಂತೋಷ್‌ ಎಸ್. ಲಾಡ್ ಸಹಾಯ ಮಾಡಿದರು&nbsp; </p></div>

ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಅಂಗವಿಕಲ ವಿಶ್ವನಾಥ್ ರೈ ವೇದಿಕೆಗೆ ಬಂದಾಗ ಕಾರ್ಮಿಕ ಸಚಿವ ಸಂತೋಷ್‌ ಎಸ್. ಲಾಡ್ ಸಹಾಯ ಮಾಡಿದರು 

   

–ಪ್ರಜಾವಾಣಿ ಚಿತ್ರ ಫಕ್ರುದ್ದೀನ್ ಎಚ್‌

ಮಂಗಳೂರು: ಅಸಂಘಟಿತ ಕಾರ್ಮಿಕರಿಗೆ ನೀಡುತ್ತಿರುವ ಸ್ಮಾರ್ಟ್ ಕಾರ್ಡ್ ಸೌಲಭ್ಯವನ್ನು ಕಂಬಳದಲ್ಲಿ ತೊಡಗಿಸಿಕೊಂಡಿರುವವರಿಗೂ ವಿತರಿಸಲಾಗುವುದು. ಅದಕ್ಕಾಗಿ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

ADVERTISEMENT

ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಮಾತನಾಡಿದ ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಬೇಡಿಕೆಗೆ ಸ್ಪಂದಿಸಿ ಈ ಭರವಸೆ ನೀಡಿದರು.

ರಾಜ್ಯದಲ್ಲಿ ಡೀಸೆಲ್, ಪೆಟ್ರೋಲ್ ಮೇಲೆ ₹ 1 ಸೆಸ್‌ ಹೇರಿ ಕಾರ್ಮಿಕ ಇಲಾ ಖೆಗೆ ಕೊಟ್ಟರೆ ಅದರಲ್ಲಿ 1.30 ಕೋಟಿ ಕಾರ್ಮಿಕರಿಗೆ ಆರೋಗ್ಯ ಕಾರ್ಡ್ ವಿತರಿ ಸುವ ಪ್ರಸ್ತಾಪವನ್ನು ಮುಖ್ಯಮಂತ್ರಿ ಮುಂದಿರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೀಡಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸಂಬಂಧಪಟ್ಟವರ ಜೊತೆ ಚರ್ಚಿಸಿ ಕಾರ್ಯಕ್ರಮ ರೂಪಿಸ ಲಾಗುವುದು ಎಂದು ಲಾಡ್ ತಿಳಿಸಿದರು. 

ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ವೇತನ ಸಮರ್ಪಕವಾಗಿ ಲಭಿಸುತ್ತಿಲ್ಲ ಎಂಬ ಆರೋಪಗಳಿದ್ದು ಇದನ್ನು ಪರಿಹರಿಸಲು ಜಿಲ್ಲಾವಾರು ಸೊಸೈಟಿ ರಚಿಸಿ ಜಿಲ್ಲಾಧಿ ಕಾರಿ ಮೂಲಕ ಉದ್ಯೋಗಿಗಳ ಖಾತೆಗಳಿಗೆ ನೇರವಾಗಿ ವೇತನ ಜಮೆ ಮಾಡಲಾಗುವುದು ಎಂದು ತಿಳಿಸಿದರು.

ಆನ್‌ಲೈನ್‌ ಪ್ಲ್ಯಾಟ್‌ಫಾರ್ಮ್‌ನಲ್ಲಿ ದುಡಿಯುತ್ತಿರುವವರ ಕ್ಷೇಮಕ್ಕಾಗಿ ಗಿಗ್ ಮಸೂದೆಯನ್ನು ಮಂಡಿಸಲಾಗಿದ್ದು ಒಂದು ವಾರದ ಒಳಗೆ ಕಾನೂನು ಆಗಲಿದೆ. ಸಾರಿಗೆ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವವರಿಗಾಗಿ ವಿವಿಧ ಯೋಜನೆಗಳಿವೆ. ಅಪಘಾತಗಳನ್ನು ತಪ್ಪಿಸಲು ಜಿಲ್ಲಾಡಳಿತ ಅರಿವು ಮೂಡಿಸುವ ಕಾರ್ಯಕ್ರಮ ಆಯೋ ಜಿಸಬೇಕು ಎಂದು ಅವರು ಸೂಚಿಸಿದರು.  

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ ಸಾಮಾಜಿಕ ಭದ್ರತೆ ಎಂಬುದು ಕೇವಲ ಪ್ರಚಾರದ ಸರಕಲ್ಲ. ಮನಸ್ಸಿಟ್ಟು ಜಾರಿಗೆ ತಂದರೆ ಅದು ಯಶಸ್ಸು ಕಾಣುತ್ತದೆ. ರಾಜ್ಯದಲ್ಲಿ ಈಗ ಇರುವ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೂ ಮುಂದುವರಿಸಬೇಕಾಗುತ್ತದೆ ಎಂದರು. 

ಶಾಸಕ ಡಾ.ವೈ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ಇಲಾಖೆ ಜಂಟಿ ಆಯುಕ್ತ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿ ಎಸ್.ಬಿ ರವಿಕುಮಾರ್‌  ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕರಾದ ವೇದ ವ್ಯಾಸ ಕಾಮತ್, ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಮಂಜುನಾಥ ಭಂಡಾರಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ ಗಫೂರ್, ಅಡ್ಯಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದಲ್ ಜಲೀಲ್, ಮೆಸ್ಕಾಂ ಅಧ್ಯಕ್ಷ ಹರಿಶ್ ಕುಮಾರ್, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಜೈನ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್, ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಮುಡಾ ಅಧ್ಯಕ್ಷ ಸದಾಶಿವ ಉಲ್ಲಾಳ್, ಕಾರ್ಮಿಕ ಆಯುಕ್ತ ಎಚ್.ಎನ್ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ದರ್ಶನ್ ಎಚ್. ವಿ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಭಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಹಾಸನ ವಿಭಾಗದ ಕಾರ್ಮಿಕ ಆಯುಕ್ತ ಗುರುಪ್ರಸಾದ್ ಎಚ್ ಎಲ್ ಪಾಲ್ಗೊಂಡಿದ್ದರು.

ಸಿದ್ದರಾಮಯ್ಯ ಅವರಿಗಾಗಿ ಪ್ರಾರ್ಥಿಸಿ...

ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ಚುರುಕಾಗಿದೆ ಎಂದು ಹೇಳಿದ ಸಚಿವ ಸಂತೋಷ್ ಲಾಡ್ ಕರ್ನಾಟಕ ನಿವಾಸಿಗಳ ತಲಾ ಆದಾಯ ಹೆಚ್ಚಾಗಿದೆ ಎಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರವೇ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. 

ಗ್ಯಾರಂಟಿ ಯೋಜನೆಗೆ ವರ್ಷದಲ್ಲಿ ₹ 60 ಸಾವಿರ ಕೋಟಿ ಸರ್ಕಾರದ ಬೊಕ್ಕಸ ದಿಂದ ಬಡವರ ಮನೆಗೆ ಸೇರುತ್ತದೆ. ಆ ಹಣ ಎಲ್ಲೂ ಜಮೆ ಮಾಡುವುದಿಲ್ಲ. ಖರೀದಿಗಾಗಿ ಬಳಸುವುದರಿಂದ ಮಾರುಕಟ್ಟೆಗೆ ವಾಪಸ್ ಬರುತ್ತದೆ. ಹೀಗಾಗಿ ಜಿಡಿಪಿ, ತಲಾ ಆದಾಯ, ಜಿಎಸ್‌ಟಿ, ಎಫ್‌ಡಿಐಯಲ್ಲಿ ಒಂದನೇ ಸ್ಥಾನದಲ್ಲಿದೆ  

ಶಕ್ತಿ ಯೋಜನೆಯಲ್ಲಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ್ದರಿಂದ 500 ಕೋಟಿ ಮಂದಿ ಓಡಾಡಿದ್ದಾರೆ. ಅವರು ರಾಜ್ಯದ ಯಾವ ದೇವಸ್ಥಾನವನ್ನೂ ನೋಡದೆ ಬಿಡಲಿಲ್ಲ. ಆದ್ದರಿಂದ ಇನ್ನು ಮುಂದೆ ದೇವರ ಗುಡಿಗೆ ಹೋದವರು ಸಿದ್ದರಾಮಯ್ಯ ಅವರಿಗೆ ಇನ್ನಷ್ಟು ಶಕ್ತಿ ತುಂಬುವಂತೆ ಮಾಡಲು ದೇವರಲ್ಲಿ ಪ್ರಾರ್ಥಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.