ಉಜಿರೆ: ಚಾರ್ಮಾಡಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು, ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ ನೇತೃತ್ವದ ತಂಡ ಲಾರಿ ತಪಾಸಣೆ ಮಾಡಿದಾಗ ಪರವಾನಗಿ ಇಲ್ಲದೆ ಮರಳು ಸಾಗಾಟ ಮಾಡುತ್ತಿರುವುದಾಗಿ ಲಾರಿ
ಚಾಲಕ ಅನ್ವರ್ ಪೊಲೀಸರಿಗೆ ತಿಳಿಸಿದ್ದಾರೆ.
ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ವರದಿ ಕಳುಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.