ಮಂಗಳೂರು: ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ವ್ಯಾಪ್ತಿಯ ರೈಲ್ವೆ ಸಮಸ್ಯೆಗಳ ಕುರಿತು ಇದೇ 17ರಂದು ನಗರದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ. ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲು ನಿಲ್ದಾಣಗಳ ವೀಕ್ಷಣೆ ಕೂಡ ಮಾಡಲಿದ್ದಾರೆ.
ತಾವು ಬರೆದ ಪತ್ರಕ್ಕೆ ಸ್ಪಂದಿಸಿ ಸಚಿವರು ಸಭೆ ಆಯೋಜಿಸಿದ್ದಾರೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.
ಸಚಿವರು 17ರಂದು ಬೆಳಿಗ್ಗೆ 9 ಗಂಟೆಗೆ ಸೆಂಟ್ರಲ್ ನಿಲ್ದಾಣ ಮತ್ತು 10 ಗಂಟೆಗೆ ಜಂಕ್ಷನ್ ರೈಲು ನಿಲ್ದಾಣವನ್ನು ವೀಕ್ಷಿಸಲಿದ್ದಾರೆ. 11 ಗಂಟೆಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸುವರು.
ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.