ADVERTISEMENT

ಉಜಿರೆ: ಕನ್ಯಾಡಿ ಕ್ಷೇತ್ರದಲ್ಲಿ ಶ್ರೀರಾಮನಾಮ ಸಪ್ತಾಹ

ಜಾತ್ರಾ ಮಹೋತ್ಸವಕ್ಕೆ ಶಾಸಕ ಹರೀಶ್‌ ಪೂಂಜ ಚಾಲನೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 6:12 IST
Last Updated 25 ಮಾರ್ಚ್ 2023, 6:12 IST
ಕನ್ಯಾಡಿಯಲ್ಲಿ ರಾಮಕ್ಷೇತ್ರದಲ್ಲಿ ಶ್ರೀರಾಮನಾಮ ಸಪ್ತಾಹ ಮತ್ತು ಜಾತ್ರಾ ಮಹೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಗುರುವಾರ ಚಾಲನೆ ನೀಡಿದರು. ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಇದ್ದರು
ಕನ್ಯಾಡಿಯಲ್ಲಿ ರಾಮಕ್ಷೇತ್ರದಲ್ಲಿ ಶ್ರೀರಾಮನಾಮ ಸಪ್ತಾಹ ಮತ್ತು ಜಾತ್ರಾ ಮಹೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಗುರುವಾರ ಚಾಲನೆ ನೀಡಿದರು. ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಇದ್ದರು   

ಉಜಿರೆ: ಧರ್ಮಸ್ಥಳ ಗ್ರಾಮದ ಕನ್ಯಾಡಿಯ ನಿತ್ಯಾನಂದನಗರದ ಶ್ರೀರಾಮಕ್ಷೇತ್ರದಲ್ಲಿ ಇದೇ 23ರಿಂದ 30ರ ವರೆಗೆ ನಡೆಯುವ ಶ್ರೀರಾಮನಾಮ ಸಪ್ತಾಹ ಮತ್ತು ಜಾತ್ರಾ ಮಹೋತ್ಸವಕ್ಕೆ ಗುರುವಾರ ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಚಾಲನೆ ನೀಡಿದರು.

ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ‘ಶ್ರೀರಾಮ ಜಯರಾಮ ಜಯ ಜಯ ರಾಮ’ ನಾಮಸ್ಮರಣೆಯೊಂದಿಗೆ ಏಳು ದಿನ ಅಹೋರಾತ್ರಿ ನಡೆಯುವ ಭಜನಾ ಸಪ್ತಾಹಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಚಾಲನೆ ನೀಡಿ‌ದರು.

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಬೆಳ್ತಂಗಡಿ ತಾಲ್ಲೂಕು ಸಂಚಾಲಕ ಜಯಂತ ಕೋಟ್ಯಾನ್, ಗೆಜ್ಜೆಗಿರಿ ಕ್ಷೇತ್ರಾಡಾಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೇರಾಜೆ, ವಕೀಲ ಭಗೀರಥ ಜಿ, ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಮಾಜಿ ಅಧ್ಯಕ್ಷ ತಿಮ್ಮಪ್ಪ ಗೌಡ ಬೆಳಾಲು,

ADVERTISEMENT

ಉದ್ಯಮಿ ಸಂಜೀವ ಪೂಜಾರಿ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಉಜಿರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಪ್ರೀತಂ ಡಿ, ಆರ್ಲ ರವೀಂದ್ರ ಪೂಜಾರಿ, ಸುಜಾತಾ ಅಣ್ಣಿ ಪೂಜಾರಿ, ವಿವಿಧ ಸಂಘಟನೆಗಳ ಪ್ರಮುಖರು, ಶ್ರೀ ರಾಮ ಕ್ಷೇತ್ರ ಸಮಿತಿ ಸದಸ್ಯರು, ಭಜನಾ ತಂಡದ ಸದಸ್ಯರು ಇದ್ದರು.

ಇದಕ್ಕೂ ಮೊದಲು ಗಣಹೋಮ, ಶ್ರೀರಾಮ ನಿತ್ಯಾನಂದ ಸ್ವಾಮಿ ಮತ್ತು ಎಲ್ಲಾ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.