ADVERTISEMENT

‘ಎಲ್ಲ ಅಂಗವಿಕಲರಿಗೂ ವಾಹನ; ಪ್ರಯತ್ನ’

ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಅಂಗವಿಕಲರಿಗೆ ತ್ರಿಚಕ್ರವಾಹನ ವಿತರಣೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 4:44 IST
Last Updated 18 ಜುಲೈ 2021, 4:44 IST
ನರಸಿಂಹರಾಜಪುರದ ಶಾಸಕರ ಕಚೇರಿ ಆವರಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಶಾಸಕ ಟಿ.ಡಿ.ರಾಜೇಗೌಡ ತ್ರಿಚಕ್ರ ವಾಹನ ಹಸ್ತಾಂತರಿಸಿದರು.
ನರಸಿಂಹರಾಜಪುರದ ಶಾಸಕರ ಕಚೇರಿ ಆವರಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಶಾಸಕ ಟಿ.ಡಿ.ರಾಜೇಗೌಡ ತ್ರಿಚಕ್ರ ವಾಹನ ಹಸ್ತಾಂತರಿಸಿದರು.   

ನರಸಿಂಹರಾಜಪುರ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಎಲ್ಲ ಅರ್ಹ ಅಂಗವಿಕಲ ಫಲಾನುಭವಿಗಳಿಗೂ ತಮ್ಮ ಶಾಸಕತ್ವ ಅವಧಿಯಲ್ಲಿ ತ್ರಿಚಕ್ರ ವಾಹನ ವಿತರಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಇಲ್ಲಿನ ಶಾಸಕರ ಕಚೇರಿಯ ಆವರಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ 2019–20ನೇ ಸಾಲಿನ ಶಾಸಕರ ನಿಧಿಯಿಂದ 7 ಅಂಗವಿಕಲರಿಗೆ ತ್ರಿಚಕ್ರವಾಹನ ಹಸ್ತಾಂತರಿಸಿ ಮಾತನಾಡಿದರು.

‘ಕೋವಿಡ್ ಕಾರಣದಿಂದ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ ಯಾಗಲು ವಿಳಂಬವಾಗಿದೆ. ಇದುವರೆಗೆ ಕ್ಷೇತ್ರದಲ್ಲಿ 25 ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಲಾಗಿದೆ’ ಎಂದರು.

ADVERTISEMENT

‘ವಿಧಾನ ಪರಿಷತ್ ಸದಸ್ಯರಾಗಿದ್ದ ಎಂ.ಶ್ರೀನಿವಾಸ್ ಅವರು ಮೊದಲ ಬಾರಿಗೆ ಕ್ಷೇತ್ರದಲ್ಲಿ ತ್ರಿಚಕ್ರವಾಹನ ವಿತರಿಸುವ ಕೆಲಸ ಮಾಡಿದರು. ಶಾಸಕರ ಅನುದಾನ, ತಾಲ್ಲೂಕು ಪಂಚಾ ಯಿತಿ, ಜಿಲ್ಲಾ ಪಂಚಾಯಿತಿ ಬರುವ ಅನುದಾನ
ದಲ್ಲಿ ಅಂಗವಿಕಲರಿಗೆ ಮೀಸಲಿಡುವ ಅನುದಾನ ಬಳಸಿಕೊಂಡು ತ್ರಿಚಕ್ರ ವಾಹನ ವಿತರಿಸುವ ಬಗ್ಗೆ ಈಗಾ ಗಲೇ ಚಿಂತನೆ ನಡೆಸಲಾಗಿದೆ’ ಎಂದರು.

ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೂಬಿನಕೆರೆಯಿಂದ ಸಾತ್ಕೋಳಿ ವರೆಗೆ ₹2ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ದೊಡ್ಡಿನತಲೆ ಗ್ರಾಮದಲ್ಲಿ ₹8ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಆಂಜನೇಯ ಸ್ವಾಮಿ ದೇವಸ್ಥಾನದ ನಿರ್ಮಾಣಕ್ಕೆ, ಸಾತ್ಕೋಳಿ ಗ್ರಾಮದಲ್ಲಿ ₹26ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುರಯ್ಯಬಾನು, ಉಪಾಧ್ಯಕ್ಷ ಮುಕುಂದ, ಸದಸ್ಯರಾದ ಪ್ರಶಾಂತ್ ಶೆಟ್ಟಿ, ಸೈಯದ್ ವಸೀಂ, ಜುಬೇದಾ, ಗ್ರಾಮ ಪಂಚಾಯಿತಿ ಸದಸ್ಯರಾದ ರಮೇಶ್, ಗಂಗಾಧರ, ಸಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್.ಸದಾಶಿವ, ಮುಖಂಡರಾದ ಸುಂದರೇಶ್, ಉಪೇಂದ್ರ, ಕಿರಣ್, ಸುನಿಲ್ ಕುಮಾರ್, ತಾಲ್ಲೂಕು ಪಂಚಾ ಯಿತಿ ಇಒ ಎಸ್.ನಯನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.