ADVERTISEMENT

ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಶ್ರೀರಾಮ ಸೇನೆ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 9:43 IST
Last Updated 29 ಜುಲೈ 2022, 9:43 IST
   

ಸುರತ್ಕಲ್: ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದನ್ನು ವಿರೋಧಿಸಿ, ಶ್ರೀರಾಮ ಸೇನೆ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

'ರಾಜ್ಯ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ', 'ಬಿಜೆಪಿ ರಾಜ್ಯಾಧ್ಯಕ್ಷರಿಗೆ ಧಿಕ್ಕಾರ', 'ಹಿಂದೂ ವಿರೋಧಿ ಸರ್ಕಾರಕ್ಕೆ ಧಿಕ್ಕಾರ' ಎಂದು ಘೋಷಣೆ ಕೂಗಿದರು.

ಪ್ರಮೋದ್ ಮುತಾಲಿಕ್ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರಿಂದ, ಅವರನ್ನು ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದ್ದರು.

ADVERTISEMENT

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.