ADVERTISEMENT

ಮೂಡುಮಾರ್ನಾಡು ಪ್ರೌಢಶಾಲೆಗೆ ಶೇ 100 ಫಲಿತಾಂಶ 

​ಪ್ರಜಾವಾಣಿ ವಾರ್ತೆ
Published 3 ಮೇ 2025, 13:32 IST
Last Updated 3 ಮೇ 2025, 13:32 IST
ಸಿಂಚನಾ
ಸಿಂಚನಾ   

ಮೂಡುಬಿದಿರೆ: ತಾಲ್ಲೂಕಿನ ಮೂಡುಮಾರ್ನಾಡು ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದ್ದಾರೆ.

ಸಿಂಚನಾ (600), ಜ್ಯೋತಿಕಾ (603) ಮತ್ತು ಕ್ಷುತಿಕಾ (571) ಸೇರಿ ಏಳು ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಅಂಕ ಪಡೆದು ತೇರ್ಗಡೆಯಾಗಿದ್ದಾರೆ. ಪರೀಕ್ಷೆಗೆ ಹಾಜರಾದ 23 ಮಂದಿಯಲ್ಲಿ 7 ಮಂದಿ ವಿಶಿಷ್ಟ ಶ್ರೇಣಿ, 15 ಮಂದಿ ಪ್ರಥಮ, ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಭಾಸ್ಕರ್ ಎಸ್.ಕೋಟ್ಯಾನ್, ಮುಖ್ಯಶಿಕ್ಷಕಿ ಬಿ.ರಾಜಶ್ರೀ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT