ADVERTISEMENT

ಎಸ್ಸೆಸ್ಸೆಲ್ಸಿ: 220 ಮಂದಿ ಗೈರು

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2022, 16:00 IST
Last Updated 30 ಮಾರ್ಚ್ 2022, 16:00 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 99 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷಾ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ದ್ವಿತೀಯ ಭಾಷಾ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ ಒಟ್ಟು 28,351 ವಿದ್ಯಾರ್ಥಿಗಳಲ್ಲಿ 220 ಮಂದಿ ಗೈರಾಗಿದ್ದರು. ಬಂಟ್ವಾಳ ಬ್ಲಾಕ್‌ನಲ್ಲಿ 37 ಮಂದಿ, ಬೆಳ್ತಂಗಡಿ ಬ್ಲಾಕ್‌ನಲ್ಲಿ 29, ಮಂಗಳೂರು ಉತ್ತರದಲ್ಲಿ 44, ಮಂಗಳೂರು ದಕ್ಷಿಣದಲ್ಲಿ 46, ಮೂಡುಬಿದಿರೆಯಲ್ಲಿ 9, ಪುತ್ತೂರಿನಲ್ಲಿ 31 ಮಂದಿ, ಸುಳ್ಯ ಬ್ಲಾಕ್‌ನಲ್ಲಿ 24 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಡಿಡಿಪಿಐ ಸುಧಾಕರ್ ಕೆ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT