ಮೂಡುಬಿದಿರೆ: 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಾನಿಧ್ಯರಾವ್ ಮರು ಮೌಲ್ಯಮಾಪನದ ನಂತರ ಪೂರ್ಣ ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ.
ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿನಿ ಎಂಬ ಕೀರ್ತಿಗೆ ಸಾನಿಧ್ಯರಾವ್ ಭಾಜನರಾಗಿರುತ್ತಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮೊದಲು ಅವರು 625ರಲ್ಲಿ 624 ಅಂಕ ಪಡೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.