ADVERTISEMENT

ಇನ್‌ಸ್ಟಾಗ್ರಾಂನಲ್ಲಿ ದ್ವೇಷ ಹುಟ್ಟಿಸುವ ಸ್ಟೇಟಸ್‌: ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 5:27 IST
Last Updated 4 ಜುಲೈ 2025, 5:27 IST
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)   

ಮಂಗಳೂರು: ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಆಶಿಕ್ ಎಸ್ ಕೋಟ್ಯಾನ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಇನ್‌ಸ್ಟಾಗ್ರಾಂನಲ್ಲಿ ‘ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕು’ ಎಂದು ಸ್ಟೇಟಸ್‌ ಹಾಕಿಕೊಂಡಿದ್ದ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 196, ಸೆಕ್ಷನ್ 353 (2), ಹಾಗೂ ಸೆಕ್ಷನ್ 351 (3) ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT