ವಂಚನೆ–ಪ್ರಾತಿನಿಧಿಕ ಚಿತ್ರ
ಮಂಗಳೂರು: ಆರಂಭಿಕ ಷೇರು ಮಾರಾಟದಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಬಹುದೆಂದು ಆಮಿಷವೊಡ್ಡಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹ 34.15 ಲಕ್ಷ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ ಬಗ್ಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದು, ಇಲ್ಲಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 25ರಂದು ನನ್ನ ಮೊಬೈಲ್‌ಗೆ ವಾಟ್ಸ್ ಆ್ಯಪ್ ಸಂದೇಶ ಕಳುಹಿಸಿದ ವ್ಯಕ್ತಿ ಐಪಿಒದಲ್ಲಿ ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸಬಹುದು ಎಂದು ತಿಳಿಸಿದ್ದ. ಆತ ಲಿಂಕ್ ಒಂದನ್ನು ಕಳುಹಿಸಿದ್ದು, ಅದರ ಮೂಲಕ ಎಂಒಎಫ್ಎಸ್‌ಎಲ್ ಆ್ಯಪ್ ತೆರೆದುಕೊಂಡಿತ್ತು. ಅದನ್ನು ಬಳಸಿ ವಿವಿಧ ಷೇರುಗಳಲ್ಲಿ ಹಣ ಹೂಡಿದ್ದೆ. ನಂತರ ಲಕ್ಷ್ಮೀಪ್ರಿಯ ಪಾಂಡ ಎಂದು ಹೆಸರು ಹೇಳಿಕೊಂಡ ಮಹಿಳೆಯೊಬ್ಬರು ಇನ್ನೊಂದು ವಾಟ್ಸ್ ಆ್ಯಪ್ ಗ್ರೂಪಿಗೆ ನನ್ನನ್ನು ಸೇರಿಸಿದರು. ಅದರಲ್ಲಿ ಬಂದ ಸಲಹೆಯಂತೆ ಜುಲೈ 28ರಿಂದ ಆ.21ರವರೆಗೆ ವಿವಿಧ ಷೇರುಗಳಿಗೆ ಒಟ್ಟು ₹34.15 ಲಕ್ಷ ಹೂಡಿಕೆ ಮಾಡಿದ್ದೆ. ಆದರೆ ಹೂಡಿಕೆ ಮಾಡಿದ ಹಣ ಹಿಂಪಡೆಯಲು ಸಾಧ್ಯವಾಗಿಲ್ಲ ಎಂಬುದಾಗಿ ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.