ADVERTISEMENT

ಅಸಭ್ಯ ನೃತ್ಯ; ವಿದ್ಯಾರ್ಥಿಗಳು ಅಮಾನತು

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2022, 4:01 IST
Last Updated 9 ಡಿಸೆಂಬರ್ 2022, 4:01 IST

ಮಂಗಳೂರು: ನಗರದ ಹೊರವಲಯದ ವಾಮಂಜೂರಿನ ಖಾಸಗಿ ಕಾಲೇಜೊಂದರ ನಾಲ್ವರು ಹುಡುಗರು ಬುರ್ಖಾ ಧರಿಸಿ, ಅಸಭ್ಯವಾಗಿ ನರ್ತಿಸಿದ್ದಾರೆಂಬ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.

ಒಂದು ಸಮುದಾಯದ ವಿದ್ಯಾರ್ಥಿನಿಯರು ಧರಿಸುವ ಬುರ್ಖಾವನ್ನು ಅದೇ ಸಮುದಾಯದ ವಿದ್ಯಾರ್ಥಿಗಳು ಧರಿಸಿ ಕಾಲೇಜಿನ ಅಧಿಕೃತ ಕಾರ್ಯಕ್ರಮ ಮುಗಿದ ಬಳಿಕ ನೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಕಾಲೇಜಿನ ಆವರಣದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಅಥವಾ ಸಮುದಾಯಗಳ ನಡುವಿನ ಸೌಹಾರ್ದಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ. ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಕಾಲೇಜಿನ ಪ್ರಮುಖರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT