ADVERTISEMENT

ಕುಕ್ಕೆ:ಮೂಲ ಮೃತ್ತಿಕಾ ಪ್ರಸಾದ ವಿತರಣೆ | ಗರ್ಭಗುಡಿಯಿಂದ ತೆಗೆದ ಮಹಾಪ್ರಸಾದ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 7:43 IST
Last Updated 21 ನವೆಂಬರ್ 2022, 7:43 IST
 ಮೂಲಮೃತ್ತಿಕಾ ಪ್ರಸಾದ ಸ್ವೀಕರಿಸಲು ಭಕ್ತರ ಸಾಲು
 ಮೂಲಮೃತ್ತಿಕಾ ಪ್ರಸಾದ ಸ್ವೀಕರಿಸಲು ಭಕ್ತರ ಸಾಲು   

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಕಾರ್ತಿಕ ಏಕಾದಶಿಯ ದಿನವಾದ ಭಾನುವಾರ ಗರ್ಭಗುಡಿಯಿಂದ ತೆಗೆದ ಮೂಲಮೃತ್ತಿಕೆಯನ್ನು ಭಕ್ತರಿಗೆ ವಿತರಿಸಲಾಯಿತು.

ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಮೃತ್ತಿಕೆಯನ್ನು ತೆಗೆದರು. ಸಹಸ್ರಾರು ಭಕ್ತರು ಬೆಳಿಗ್ಗೆ 10 ಗಂಟೆಯಿಂದಲೇ ಮೃತ್ತಿಕಾ ಪ್ರಸಾದ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಮೂಲಮೃತ್ತಿಕಾ ಪ್ರಸಾದ ತೆಗೆಯಲು ಇದ್ದ ಕಾರಣ, ಮಧ್ಯಾಹ್ನ 2 ಗಂಟೆಯ ನಂತರ ದೇವರ ದರ್ಶನಕ್ಕೆ ಅವಕಾಶ ಮಾಡಲಾಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ವನಜಾ.ವಿ.ಭಟ್, ಪಿಜಿಎಸ್ಎನ್ ಪ್ರಸಾದ್, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಶೋಭಾ ಗಿರಿಧರ್, ಲೋಕೇಶ್ ಮುಂಡುಕಜೆ, ಎಇಒ ಪುಷ್ಪಲತಾ ರಾವ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಮನೋಜ್ ಸುಬ್ರಹ್ಮಣ್ಯ, ಕಿಶೋರ್‌ ಕುಮಾರ್ ಕೂಜುಗೋಡು, ಚಂದ್ರಶೇಖರ ಮರ್ಧಾಳ, ಚಂದ್ರಶೇಖರ ನಲ್ಲೂರಾಯ, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.