ADVERTISEMENT

 ಸುಬ್ರಹ್ಮಣ್ಯ: ಕಸ ಎಸೆದವರಿಗೆ ದಂಡ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 5:58 IST
Last Updated 9 ಸೆಪ್ಟೆಂಬರ್ 2025, 5:58 IST
ಸುಬ್ರಹ್ಮಣ್ಯದ ಕುಮಾರಧಾರ ನದಿಯ ಸೇತುವೆಯಿಂದ ಕಸ ಎಸೆದ ವ್ಯಕ್ತಿ
ಸುಬ್ರಹ್ಮಣ್ಯದ ಕುಮಾರಧಾರ ನದಿಯ ಸೇತುವೆಯಿಂದ ಕಸ ಎಸೆದ ವ್ಯಕ್ತಿ   

ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯ ಸೇತುವೆಯಿಂದ ಸೋಮವಾರ ಕಸ ಎಸೆದ ವ್ಯಕ್ತಿಯನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗಿದೆ.

ವೇದವ್ಯಾಸ ತಂತ್ರಿ ಕಾರ್ಕಳ ಎಂಬುವರು ಕಸ ಎಸೆದಿದ್ದು, ಈ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ ಕ್ಯಾಮೆರಾದಲ್ಲಿ  ಸೆರೆ ಹಿಡಿದು ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿದ್ದಾರೆ. ಸುಬ್ರಹ್ಮಣ್ಯ ಪಂಚಾಯಿತಿಯವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ವಾಹನ ಮಾಲಕರನ್ನು ಪತ್ತೆ ಹಚ್ಚಿದ್ದಾರೆ. ವೇದವ್ಯಾಸ ಅವರಿಗೆ ₹2 ಸಾವಿರ ದಂಡ ವಿಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT