ಸುಬ್ರಹ್ಮಣ್ಯ: ಇಲ್ಲಿನ ಕುಮಾರಸ್ವಾಮಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಸ್ಯಾನಿಟರಿ ಪ್ಯಾಡ್ ಹಸ್ತಾಂತರ ಹಾಗೂ ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಸುರಕ್ಷತಾ ಕಾರ್ಯಕ್ರಮ, ಮಾಹಿತಿ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ರೋಟರಿ ಕ್ಲಬ್, ಬೆಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು.
ಅತಿಥಿಗಳಾಗಿ ಬೆಂಗಳೂರು ಸೆಂಟ್ರಲ್ ರೋಟರಿ ಕ್ಲಬ್‌ನ ಅಧ್ಯಕ್ಷ ಶಿವಾನಂದ ಅವರು ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಮೆಷಿನ್ ಅನ್ನು ಶಾಲಾ ಮುಖ್ಯ ಶಿಕ್ಷಿಗೆ ಹಸ್ತಾಂತರಿಸಿದರು.
ಬೆಂಗಳೂರು ರೋಟರಿ ಜಿಲ್ಲೆ 3192ಯ ಸೌಮ್ಯಾ ಶ್ರೀಕಾಂತ ಮಾಹಿತಿ ನೀಡಿದರು.
ರೋಟರಿ ವಲಯ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ನಿಯೋಜಿತ ಅಧ್ಯಕ್ಷ ಜಯಪ್ರಕಾಶ್, ಕಾರ್ಯದರ್ಶಿ ಭವಾನಿ ಶಂಕರ ಪೈಲಾಜೆ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂಕೀರ್ತ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಭಾಗವಹಿಸಿದ್ದರು. ಸುಬ್ರಹ್ಮಣ್ಯ ರೋಟರಿ ಕ್ಲಬ್ ಪೂರ್ವ ಅಧ್ಯಕ್ಷ ಗೋಪಾಲ ಎಣ್ಣೆ ಮಜಲ್ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.