ADVERTISEMENT

ಸುಬ್ರಹ್ಮಣ್ಯ: ವಿದ್ಯಾರ್ಥಿ ಕವಿಗೋಷ್ಠಿಗೆ ಕವನ ಆಹ್ವಾನ

ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 6:23 IST
Last Updated 21 ಅಕ್ಟೋಬರ್ 2025, 6:23 IST
<div class="paragraphs"><p>ಸಾದರ ಸ್ವೀಕಾರ</p></div>

ಸಾದರ ಸ್ವೀಕಾರ

   

ಸುಬ್ರಹ್ಮಣ್ಯ: ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನ.16ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಈ ಸಂಬಂಧ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.

ಪಂಜ ಹೋಬಳಿಯ ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು, ಕೂತ್ಕುಂಜ, ಮುರುಳ್ಯ, ಐವತೊಕ್ಲು, ಪಂಬೆತ್ತಾಡಿ ಹಾಗೂ ಸುಳ್ಯ ಹೋಬಳಿಯ ಕಲ್ಮಡ್ಕ, ಕಳಂಜ, ಬಾಳಿಲ, ಅಮರ ಮುಡ್ನೂರು, ಅಮರ ಪಡ್ನೂರು, ನೆಲ್ಲೂರು ಕೆಮ್ರಾಜೆ ಮತ್ತು ಮಡಪ್ಪಾಡಿ ಗ್ರಾಮಗಳ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಕನ್ನಡ ನಾಡು-ನುಡಿ ಹಾಗೂ ಭಾಷೆಗೆ ಸಂಬಂಧಿಸಿದ ಕವನಗಳ ಜೊತೆಗೆ ತಮ್ಮ ಸ್ವ-ಪರಿಚಯವನ್ನು ಕಳುಹಿಸಬಹುದು. ಕವನ ಕಳುಹಿಸಲು ಅ.23ಕೊನೆಯ ದಿನ.

ADVERTISEMENT

ಆಯ್ಕೆಯಾದ ವಿದ್ಯಾರ್ಥಿಗಳು ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಅವಕಾಶ ಇದೆ. ಕವನಗಳನ್ನು ಕಳುಹಿಸುವವರು ಯೋಗೀಶ್ ಹೊಸೊಳಿಕೆ ಅವರ ಮೊಬೈಲ್ ಸಂಖ್ಯೆ 9449576632ಗೆ ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಬೇಕೆಂದು ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಪಂಜ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.