
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮದವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಸುಬ್ರಹ್ಮಣ್ಯದಲ್ಲಿ ಸೋಮವಾರ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿಯವರು ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಅನ್ಯಧರ್ಮೀಯರನ್ನು, ಹಿಂದೂ ಧರ್ಮದಲ್ಲಿ ನಂಬಿಕೆ ಇಲ್ಲದವರನ್ನು ಆಹ್ವಾನಿಸಿರುವುದು ಖಂಡನೀಯ. ಹಿಂದೂ ಧಾರ್ಮಿಕ ದತ್ತಿ ಇಲಾಖೆ ಕಾಯ್ದೆ ಪ್ರಕಾರ ಅನ್ಯಧರ್ಮದವರಿಗೆ ದೇವಸ್ಥಾನದ ಯಾವುದೇ ಟೆಂಡರುಗಳಾಗಲಿ ಹಾಗೂ ವ್ಯಾಪಾರ ವೈವಾಟುಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.
ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ ಕಾರ್ಯಕ್ರಮಕ್ಕೆ ಅನ್ಯಮತೀಯರು ಬಂದರೆ ಘೇರಾವ್ ಹಾಕಲಾಗುವುದು ಎಂದರು. ಸರ್ಕಾರದ ಪ್ರೊಟೊಕಾಲ್ ಪ್ರಕಾರ ಆಮಂತ್ರಣ ಪತ್ರಿಕೆ ತಯಾರಿಸಲಾಗಿದೆ. ಮನವಿಯನ್ನು ಮೇಲಧಿಕಾರಿಗಳಿಗೆ ತಲುಪಿಸಲಾಗುವುದು ಎಂದು ದೇವಸ್ಥಾನದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಭರವಸೆ ನೀಡಿದರು.
ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಅಜಿತ್ ಮಾತನಾಡಿದರು. ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಚಿದಾನಂದ ಕಂದಡ್ಕ, ಪ್ರಮುಖರಾದ ರಘು ಸಕಲೇಶಪುರ, ಮೋಹನದಾಸ್, ಪ್ರಸನ್ನ ದಬರ್ೆ, ಕಿಶೋರ್ ಶಿರಾಡಿ, ಸುಜಾತ ಕಲ್ಲಾಜೆ, ರಾಜೇಶ್ ಎನ್.ಎಸ್., ಶ್ರೀಕುಮಾರ ಬಿಲದ್ವಾರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.