ಮಂಗಳೂರು: ಬಜಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಸುಹಾಸ್ ಶೆಟ್ಟಿ ಮೃತದೇಹವನ್ನು ಮೆರವಣಿಗೆಯಲ್ಲಿ ಅವರ ಊರು ಬಂಟ್ವಾಳ ತಾಲ್ಲೂಕಿನ ಕಾರಿಂಜಕ್ಕೆ ತರಲಾಗಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
ಹತ್ಯೆಯಾಗಿರುವ ಸುಹಾಸ್ ಶೆಟ್ಟಿ ಅವಿವಾಹಿತ. ಅವರ ತಂದೆ ವಸಂತ್, ತಾಯಿ ಸುಲೋಚನಾ, ತಮ್ಮ ಸುಹಾನ್ ಕಾರಿಂಜದ ಮನೆಯಲ್ಲಿದ್ದು, ತೋಟ ನೋಡಿಕೊಂಡಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಕಾರಿಂಜದಲ್ಲಿರುವ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ, ಮೃತದೇಹದ ಅಂತಿಮ ದರ್ಶನ ಪಡೆದರು.
ಸುಹಾಸ್ ಮನೆಗೆ ಭೇಟಿ: ತಾಯಿಗೆ ಸಾಂತ್ವನ
ಹತ್ಯೆಯಾಗಿರುವ ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಮನೆಗೆ ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಹಿಂದುತ್ವವಾದಿ ಮುಖಂಡ ಅರುಣ್ ಪುತ್ತಿಲ ಭೇಟಿ ನೀಡಿ ಅವರ ತಾಯಿಗೆ ಸಾಂತ್ವನ ಹೇಳಿದರು.
ವಿಶ್ವಹಿಂದೂ ಪರಿಷತ್ ಮುಖಂಡ ಮಿಲಿಂದ್ ಪರಾಂಡೆ, ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್‌ವೆಲ್, ಮಾಜಿ ಶಾಸಕ ಸಂಜೀವ ಮಠಂದೂರು ಮತ್ತಿತರರು ಇದ್ದರು. ಸುಹಾಸ್ ಶೆಟ್ಟಿ ಮನೆಯ ಬಳಿ ಸಾಕಷ್ಟು ಜನರು ಸೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.