
ಪ್ರಜಾವಾಣಿ ವಾರ್ತೆ
ಮಂಗಳೂರು: ಕಿನ್ನಿಪದವಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಯ ನಂತರ ದ್ವೇಷ ಭಾವನೆ ಕೆರಳಿಸುವಂಥ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ ವ್ಯಕ್ತಿಗಳು ಮತ್ತು ಗುಂಪುಗಳ ವಿರುದ್ಧ ನಗರ ಪೊಲೀಸ್ ಕಮಿಷನರೇಟ್‌ನ ವಿವಿಧ ಠಾಣೆಗಳಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ.
ಮೂಲ್ಕಿ, ಕಾವೂರು ಮತ್ತು ಮಂಗಳೂರು ದಕ್ಷಿಣ ಠಾಣೆಗಳಲ್ಲಿ ತಲಾ ಎರಡು, ಮಂಗಳೂರು ಉತ್ತರ, ಪೂರ್ವ, ಉರ್ವ, ಬರ್ಕೆ, ಮೂಡುಬಿದಿರೆ ಮತ್ತು ಕಂಕನಾಡಿ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ತರುವ ಉದ್ದೇಶದಿಂದ ಪೋಸ್ಟ್ ಹಾಕಲಾಗಿದ್ದು ಭಾರತೀಯ ನ್ಯಾಯಸಂಹಿತೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.