ಬಂಟ್ವಾಳ: ಇಲ್ಲಿನ ಕಾರಿಂಜ ಸಮೀಪದ ಪುಳಿಮಜಲು ನಿವಾಸಿ, ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಅವಿಭಜಿತ ಜಿಲ್ಲೆಯ ಶಾಸಕರು, ಸಂಸದರ ನಿಯೋಗ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿಯಾದರು.
ಸುಹಾಸ್ ಅವರ ತಂದೆ ಮೊಹನ್ ಶೆಟ್ಟಿ, ತಾಯಿ ಸುಲೋಚನಾ ಶೆಟ್ಟಿ ಅವರು ಮನವಿ ಸಲ್ಲಿಸಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸುಹಾಸ್ ಶೆಟ್ಟಿ ಸಂಬಂಧಿ ರಾಜೇಶ್ ಭಂಡಾರಿ, ಕಾವಳಮೂಡೂರು ಗ್ರಾ.ಪಂ ಅಧ್ಯಕ್ಷ ಅಜಿತ್ ಶೆಟ್ಟಿ ಜತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.