ADVERTISEMENT

ಸುಹಾಸ್ ಶೆಟ್ಟಿ ಕುಟುಂಬಕ್ಕೆ ನಳಿನ್ ಕುಮಾರ್ ಕಟೀಲ್ ₹1 ಲಕ್ಷ ನೆರವು ಹಸ್ತಾಂತರ

ಕಾರಿಂಜ: ಸುಹಾಸ್ ಶೆಟ್ಟಿ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ

​ಪ್ರಜಾವಾಣಿ ವಾರ್ತೆ
Published 6 ಮೇ 2025, 14:19 IST
Last Updated 6 ಮೇ 2025, 14:19 IST
ಇತ್ತೀಚೆಗೆ ಹತ್ಯೆಯಾದ ಸುಹಾಸ್ ಶೆಟ್ಟಿ ಅವರ ಮನೆಗೆ ಮುಖಂಡ ನಳಿನ್ ಕುಮಾರ್ ಕಟೀಲ್‌ ಮಂಗಳವಾರ ಭೇಟಿ ನೀಡಿದರು
ಇತ್ತೀಚೆಗೆ ಹತ್ಯೆಯಾದ ಸುಹಾಸ್ ಶೆಟ್ಟಿ ಅವರ ಮನೆಗೆ ಮುಖಂಡ ನಳಿನ್ ಕುಮಾರ್ ಕಟೀಲ್‌ ಮಂಗಳವಾರ ಭೇಟಿ ನೀಡಿದರು   

ಬಂಟ್ವಾಳ: ಬಜಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರ ಪುಳಿಮಜಲಿನ ಮನೆಗೆ ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್‌ ಮಂಗಳವಾರ ಭೇಟಿ ನೀಡಿ, ವೈಯಕ್ತಿಕವಾಗಿ ₹ 1 ಲಕ್ಷ ನೆರವು ನೀಡಿದರು. 

ಸುಹಾಸ್ ಅವರನ್ನು ಕಳೆದುಕೊಂಡ ಕುಟುಂಬದ ಜತೆಗೆ ನಾನು ಸದಾ ಇದ್ದೇನೆ ಎಂದು ಅವರು ಭರವಸೆ ನೀಡಿದರು.

ಸುಹಾಸ್ ತಂದೆ ಮೋಹನ ಶೆಟ್ಟಿ ಮತ್ತು ತಾಯಿ ಸುಲೋಚನಾ ಅವರು ಮಾತನಾಡಿ, ‘ನಮಗೆ ರಾಜ್ಯ ಸರ್ಕಾರ ಮತ್ತು ಪೊಲೀಸರಿಂದ ನ್ಯಾಯ ಸಿಗುವ ಭರವಸೆ ಇಲ್ಲ. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸುವ ಮೂಲಕ ನಮಗೆ ನ್ಯಾಯ ದೊರಕಿಸಿ ಕೊಡಬೇಕು. ಮುಂದಿನ ದಿನಗಳಲ್ಲಿ ಯಾವುದೇ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಇಂಥ ಕಷ್ಟ ಎದುರಾಗಬಾರದು’ ಎಂದು ಅಳಲು ತೋಡಿಕೊಂಡರು.

ADVERTISEMENT

ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು, ವಿಜಯ ಕುಮಾರ್ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ, ಹರೀಶ್ ಕಂಜಿಪಿಲಿ, ರವೀಶ್ ಶೆಟ್ಟಿ ಕಾರ್ಕಳ, ಸುದರ್ಶನ ಬಜ, ಮಾಧವ ಎಸ್.ಮಾವೆ, ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿಗುತ್ತು, ಪುರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ್ ರೈ ಮಾಣಿ, ದಿನೇಶ್ ಶೆಟ್ಟಿ ದಂಬೆದಾರ್, ಅಜಿತ್ ಶೆಟ್ಟಿ ಕಾರಿಂಜ, ಹರೀಶ್ ಕುತ್ತಾರ್, ರವಿರಾಮ ರೈ, ನಾಗೇಶ್ ಶೆಟ್ಟಿ ಕೊಡಂಗಾಯಿ, ಸತೀಶ್ ಶೆಟ್ಟಿ ಮಧ್ವ, ಅಜಿತ್ ಪುತ್ತೂರು, ರಂಜಿತ್, ಸುಕೇಶ್ ಚೌಟ, ಕಾರ್ತಿಕ್‌ ಬಲ್ಲಾಳ್, ಶ್ಯಾಮಣ್ಣ ಶೆಟ್ಟಿ, ಹರೀಶ್ ಆಚಾರ್ಯ ರಾಯಿ, ಅರುಣ್ ಕುವೆಲ್ಲೊ ಜತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.