ವಿಟ್ಲ(ದಕ್ಷಿಣ ಕನ್ನಡ): ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ನೀಡಿರುವ ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ವಿಟ್ಲದಲ್ಲಿ ಬೆಂಬಲ ವ್ಯಕ್ತವಾಗಿದೆ.
ಬೆಳಿಗ್ಗೆ ಕೇರಳ ರಾಜ್ಯ ಮತ್ತು ಕರ್ನಾಟಕದ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚಾರ ಪ್ರಾರಂಭಿಸಿದ್ದವು. ನಂತರ ಬಸ್ ಸಂಚಾರ ಸ್ಥಗಿತಗೊಂಡಿದೆ. ಖಾಸಗಿ ಬಸ್‌ಗಳು ಬೆಳಗಿನಿಂದ ರಸ್ತೆಗೆ ಇಳಿಯಲಿಲ್ಲ. ತುರ್ತು ಸೇವೆಗಳಾದ ಆಸ್ಪತ್ರೆ, ಔಷಧ ಅಂಗಡಿ, ಹಾಲಿನ ಅಂಗಡಿ ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳು ಬಂದ್ ಆಗಿವೆ. ವಿಟ್ಲ ಪೊಲೀಸರು ಅಲ್ಲಲ್ಲಿ ನಾಕಾಬಂದಿ ಹಾಕಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.