ADVERTISEMENT

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಎನ್‌ಐಎ ತಂಡ ಭೇಟಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2025, 15:29 IST
Last Updated 14 ಜೂನ್ 2025, 15:29 IST
<div class="paragraphs"><p>ಎನ್‌ಐಎ</p></div>

ಎನ್‌ಐಎ

   

(ಪಿಟಿಐ ಸಂಗ್ರಹ ಚಿತ್ರ)

ಮಂಗಳೂರು: ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ಮೇ 1ರಂದು ನಡೆದಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ಶನಿವಾರ ನಗರಕ್ಕೆ ಭೇಟಿ ನೀಡಿದರು.

ADVERTISEMENT

‘ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಬಿಜೆಪಿ ಮುಖಂಡರು, ಹಿಂದುತ್ವವಾದಿ ಸಂಘಟನೆಗಳು ಒತ್ತಾಯಿಸಿದ್ದವು. ಸ್ಥಳೀಯ ಸಂಸದ ಕ್ಯಾ. ಬ್ರಿಜೇಶ್ ಚೌಟ ಈ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೇಂದ್ರ ಗೃಹ ಸಚಿವಾಲಯವು ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ ಜೂನ್ 7ರಂದು ಆದೇಶ ಹೊರಡಿಸಿತ್ತು. ‌

ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಈವರೆಗೆ 12 ಜನರನ್ನು ಬಂಧಿಸಲಾಗಿದೆ. ಸುಹಾಸ್ ಶೆಟ್ಟಿ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಅವರ ಮೇಲೆ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.