ADVERTISEMENT

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಸುಳಿವು | ಶೀಘ್ರ ಬಂಧನ: ಎಡಿಜಿಪಿ ಆರ್. ಹಿತೇಂದ್ರ

​ಪ್ರಜಾವಾಣಿ ವಾರ್ತೆ
Published 2 ಮೇ 2025, 6:38 IST
Last Updated 2 ಮೇ 2025, 6:38 IST
<div class="paragraphs"><p>ಸುಹಾಸ್ ಶೆಟ್ಟಿ</p></div>

ಸುಹಾಸ್ ಶೆಟ್ಟಿ

   

ಮಂಗಳೂರು: ಬಜಪೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಹೆಸರು ಸಹಿತ ಸುಳಿವು ದೊರೆತಿದೆ. ಆರೋಪಿಗಳನ್ನು ಬಂಧಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದ್ದು ಯಾರೇ ಆದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಭದ್ರತೆಗಾಗಿ 22 ಕೆಎಸ್‌ಆರ್‌ಪಿ , ಐವರು ಎಸ್‌ಪಿ, 1,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಪೊಲೀಸ್ ಇಲಾಖೆ ವಾಸ್ತವವನ್ನು ಕಾಲಕಾಲಕ್ಕೆ ಅಪ್‌ಡೇಟ್ ಮಾಡುತ್ತದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.