ಸ್ಪೀಕರ್ ಖಾದರ್
ಮಂಗಳೂರು: ಮಂಗಳೂರಿನ ಬಜಪೆ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಶೆಟ್ಟಿ ಎಂಬುವರ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸ್ಪೀಕರ್ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಲಾಗಿದೆ.
ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.