ADVERTISEMENT

ಸುಹಾಸ್‌ ಶೆಟ್ಟಿ ಅಂತ್ಯಸಂಸ್ಕಾರ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 2 ಮೇ 2025, 16:04 IST
Last Updated 2 ಮೇ 2025, 16:04 IST

ಮಂಗಳೂರಿನ ಬಜಪೆ ಬಳಿ ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್‌ ಸುಹಾಸ್‌ ಶೆಟ್ಟಿಯ ಅಂತ್ಯಸಂಸ್ಕಾರವು ಅವರ ಊರಾದ ಬಂಟ್ವಾಳ ತಾಲ್ಲೂಕಿನ ಕಾರಿಂಜದಲ್ಲಿ ಶುಕ್ರವಾರ ನೆರವೇರಿತು. ಸುಹಾಸ್‌ ಶೆಟ್ಟಿಯ ಹತ್ಯೆಯನ್ನು ಖಂಡಿಸಿದ ಬಿಜೆಪಿ ನಾಯಕರು, ಗುರುವಾರ ತಡರಾತ್ರಿಯೇ ಬಜಪೆಯ ಎ.ಜೆ. ಆಸ್ಪತ್ರೆ ಬಳಿ ಸೇರಿದ್ದರು. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅತ್ತ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ರು ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.