ADVERTISEMENT

ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 5ರವರೆಗೆ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 2 ಮೇ 2025, 3:02 IST
Last Updated 2 ಮೇ 2025, 3:02 IST
   

ಮಂಗಳೂರು: ರೌಡಿಶೀಟರ್, ಹಿಂದುತ್ವವಾದಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಸೀಮಿತವಾಗಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಸ್ತರಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇದೇ 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಹೋಟೆಲ್‌ಗಳೂ ಬಾಗಿಲು ಹಾಕಿವೆ. ಕೆಲ ಹೋಟೆಲ್‌ಗಳು ಅರ್ಧಬಾಗಿಲು ತೆರೆದು ಕಾರ್ಯಾಚರಿಸುತ್ತಿವೆ. ಅಟೋ ರಿಕ್ಷಾ ಹಾಗೂ ಖಾಸಗಿ ವಾಹನಗಳ ಹೊರತಾಗಿ ಇತರ ವಾಹನಗಳ ಸಂಚಾರ ಬಹುತೇಕ ಸ್ಥಗಿತಗೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.