ADVERTISEMENT

ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಬಳಿಕ ನೇತ್ರಾವತಿ ನದಿಗೆ ಹಾರುವವರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2020, 6:08 IST
Last Updated 29 ಫೆಬ್ರುವರಿ 2020, 6:08 IST
ನೇತ್ರಾವತಿ ನದಿ –ಪ್ರಜಾವಾಣಿ ಚಿತ್ರ
ನೇತ್ರಾವತಿ ನದಿ –ಪ್ರಜಾವಾಣಿ ಚಿತ್ರ   

ಮಂಗಳೂರು:ಉದ್ಯಮಿ ಸಿದ್ಧಾರ್ಥ ಸಾವಿನ ಬಳಿಕ ಕಲ್ಲಾಪು ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಶನಿವಾರವೂ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೇರಮಜಲು ನಿವಾಸಿ ಉಮಾ ಪ್ರಕಾಶ್ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನೇತ್ರಾವತಿ ನದಿಯ ಮೇಲಿನ ರೈಲ್ವೆ ಸೇತುವೆ ಮೇಲೆ ಶುಕ್ರವಾರ ಸಂಜೆ ಚಪ್ಪಲಿ ಮತ್ತು ಬ್ಯಾಗ್ ಇರಿಸಿ ನಾಪತ್ತೆಯಾಗಿದ್ದರು.

ಶನಿವಾರ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದ ಸೈಮನ್ ಮೀನುಗಾರ ಉಳ್ಳಾಲ‌‌ ಸಮೀಪ ನೀರಿನಲ್ಲಿ ತೇಲುತ್ತಿದ್ದ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.